ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಸರ್ಕಾರದಿಂದ ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
ʻಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲʼ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದುಗೊಳ್ಳಲಿದೆ ಎಂದು ಬಿಜೆಪಿ ನಾಯಕರು ಹಾಗೂ ಮಾಗಡಿ ಕಾಂಗ್ರೆಸ್ ಶಾಸಕರಾದ ಎಚ್ ಸಿ ಬಾಲಕೃಷ್ಣ ( Balakrishna) ಹೇಳಿಕೆ ನೀಡಿದ್ದರು.
ಎಚ್.ಸಿ.ಬಾಲಕೃಷ್ಣ ಹೇಳಿಕೆಯಲ್ಲಿ ಏನಿದೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದರು. ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ್ದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಹೇಳಿದ್ದಾರೆ.
ಈ ಸುದ್ದಿ ನೋಡಿ:- ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ಸೇವೆ ಆರಂಭ
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ” ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು” ಎಂದು ಸ್ಪಷ್ಟನೆ ನೀಡಿದರು.
ಗ್ಯಾರಂಟಿ ನಿಲ್ಲಿಸಲ್ಲ ಎಂದ ಸಿಎಂ
ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಈ ಬಡವರ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಬಡವರ ಈ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯೋಚನೆಯನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕೊಟ್ಟ ಭರವಸೆಯಂತೆ ನಾವು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ( Five Guarantee Schemes) ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ಆ ಯೋಜನೆಗಳನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ಎಲ್ಲ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸುದ್ದಿ ನೋಡಿ:- ಯಾವುದೇ ಗ್ಯಾರಂಟಿ ಇಲ್ಲದೇ ಬಡ್ಡಿ ಇಲ್ಲದೆ 3 ಲಕ್ಷದವರೆಗೆ ಸಾಲ.! ಕೇಂದ್ರ ಸರ್ಕಾರದ ಹೊಸ ಯೋಜನೆ.!
ಐದಲ್ಲ ಹತ್ತು ವರ್ಷ ಮುಂದುವರೆಸುತ್ತೇವೆ
ಆದರೆ, ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಸಂಕಷ್ಟದ ನಡುವೆಯೂ ಗ್ಯಾರೆಂಟಿಗಳನ್ನ ಜಾರಿ ಮಾಡಿದ್ದಾರೆ. ಲೋಕಸಭೆಯಲ್ಲಿ ಹಿನ್ನಡೆಯಾದರೆ ಅದೇ ಹಣವನ್ನ ಅಭಿವೃದ್ದಿಗೆ ನೀಡಿ ಅಂತ ಹೇಳಿದ್ದೇನೆ. ಗ್ಯಾರೆಂಟಿಗಳನ್ನ ಐದಲ್ಲ ಹತ್ತು ವರ್ಷ ಮುಂದುವರೆಸುತ್ತೇವೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನ ಶಕ್ತಿ ತುಂಬಬೇಕಲ್ವಾ? ಮಂತ್ರಾಕ್ಷತೆಗೆ ಮತ ಹಾಕ್ತಿರೋ, ಗ್ಯಾರೆಂಟಿಗಳಿಗೆ ಹಾಕ್ತಿರೋ ನೀವೆ ತೀರ್ಮಾನ ಅಂತ ಹೇಳಿದ್ದೇನೆ ತಪ್ಪೇನಿದೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಗೆದ್ರೆ 5 ಗ್ಯಾರಂಟಿಗಳನ್ನು ಜಾರಿಗೆ ತರೋದಾಗಿ ಘೋಷಿಸಿದ್ದರು. ಅದರಂತೇ ಕಾಂಗ್ರೆಸ್ ‘ಶಕ್ತಿ’, ‘ಗೃಹ ಜ್ಯೋತಿ’, ‘ಅನ್ನ ಭಾಗ್ಯ’, ‘ಗೃಹ ಲಕ್ಷ್ಮಿ’ ಮತ್ತು ‘ಯುವ ನಿಧಿ’ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆಯನ್ನು ಜೂನ್ 11, 2023ರಂದು, ಗೃಹಜ್ಯೋತಿ ಯೋಜನೆಯನ್ನು ಜುಲೈ 1, 2023ರಂದು, ಅನ್ನಭಾಗ್ಯ ಯೋಜನೆಯನ್ನು ಜುಲೈ 2023ರಂದು, ಗೃಹಲಕ್ಷ್ಮೀ ಯೋಜನೆ ಮತ್ತು ಯುವನಿಧಿ ಯೋಜನೆಯನ್ನು ಜನವರಿ 12, 2024ರಂದು ಜಾರಿಗೊಳಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭಗಳನ್ನು ವಿತರಿಸಿದೆ.
ಈ ಸುದ್ದಿ ನೋಡಿ:- ಉಚಿತ ಗ್ಯಾಸ್ ಸಿಲಿಂಡರ್ & ಗ್ಯಾಸ್ ಸ್ಟವ್ ಪಡೆಯಲು ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ.!
ಶಕ್ತಿ ಯೋಜನೆ
ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಆರಂಭಿಸಿದ 5 ಗ್ಯಾರಂಟಿಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡುವ ʻಶಕ್ತಿ ಯೋಜನೆʼಯು ಒಂದಾಗಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಅಂದರೆ, 2023 ರ ಜೂನ್ 11 ರಂದು ಶಕ್ತಿ ಯೋಜನೆಯನ್ನು ಆರಂಭಿಸಿತು. ಇನ್ನು ಶಕ್ತಿ ಯೋಜನೆಯ ವೆಚ್ಚವನ್ನು ರಾಜ್ಯ ಸರ್ಕಾರವು ಆಯಾ ಸಾರಿಗೆ ಸಂಸ್ಥೆಗಳಿಗೆ ಹಂತ ಹಂತವಾಗಿ ನೀಡುತ್ತಿದೆ. ಸಾರಿಗೆ ಸಂಸ್ಥೆಗಳ ಉನ್ನತೀಕರಣಕ್ಕಾಗಿ ಸರ್ಕಾರ 500 ಕೋಟಿ ರೂ ಮೀಸಲಿಟ್ಟು 1200ಕ್ಕೂ ಅಧಿಕ ಬಸ್ ಖರೀದಿಗೆ ಯೋಜನೆ ರೂಪಿಸಿದೆ.
ಗೃಹ ಜ್ಯೋತಿ ಯೋಜನೆ
ಗೃಹ ಜ್ಯೋತಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಆಗಸ್ಟ್ 5, 2023 ರಂದು ಕಲಬುರಗಿ ನಗರದಲ್ಲಿ ಪ್ರಾರಂಭಿಸಿತು. ಇದು 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಭರವಸೆ ನೀಡಿದ ಐದು ಚುನಾವಣಾ ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ರಾಜ್ಯದ 2.14 ಕೋಟಿ ಅರ್ಹ ಗ್ರಾಹಕರಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತದೆ.
ಈ ಸುದ್ದಿ ನೋಡಿ:- ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾ-ಕ್.! ಈ ಲಿಸ್ಟ್ ನಲ್ಲಿ ಇರುವ 26,000 ಮಹಿಳೆಯರಿಗೆ ಸಿಗೋದಿಲ್ಲ 2000.!
ಗೃಹ ಜ್ಯೋತಿ ಯೋಜನೆಯು ಕರ್ನಾಟಕ ಸರ್ಕಾರವು ಆಗಸ್ಟ್ 2022 ರಲ್ಲಿ ಪ್ರಾರಂಭಿಸಿದ ಕಲ್ಯಾಣ ಯೋಜನೆಯಾಗಿದೆ. ಈ ಯೋಜನೆಯು ಮನೆಗಳಿಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತದೆ. ಕರ್ನಾಟಕದ ಎಲ್ಲಾ ದೇಶೀಯ ವಿದ್ಯುತ್ ಗ್ರಾಹಕರು ತಮ್ಮ ಆದಾಯ ಅಥವಾ ಸಾಮಾಜಿಕವನ್ನು ಲೆಕ್ಕಿಸದೆ ಈ ಯೋಜನೆಗೆ ಅರ್ಹರಾಗಿದ್ದಾರೆ.
ಅನ್ನ ಭಾಗ್ಯ ಯೋಜನೆ
ಜುಲೈ ತಿಂಗಳಿಂದ ಈ ಯೋಜನೆ ಜಾರಿಗೆ ಬಂದಿದ್ದು, ಪ್ರತಿ ಕೆಜಿ ಅಕ್ಕಿಗೆ ₹34ರಂತೆ ಐದು ಕೆಜಿ ಅಕ್ಕಿ ಮೌಲ್ಯವನ್ನು ₹170 (ಒಬ್ಬ ಸದಸ್ಯನಿಗೆ) ಸರ್ಕಾರ ನೇರವಾಗಿ ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥನ ಖಾತೆಗೆ ಜಮೆ ಮಾಡುತ್ತಿದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿ ಐದು ಕೆಜಿಯ ಹಣವು ತಾಂತ್ರಿಕ ಕಾರಣಗಳಿಂದ ಅರ್ಹ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವ ಸಮಸ್ಯೆಗೆ ರಾಜ್ಯ ಸರ್ಕಾರ ಪರಿಹಾರ ಕಂಡುಕೊಂಡಿದೆ. ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥರ ಖಾತೆಗೆ ಬದಲಾಗಿ, ಅವರ ನಂತರ ಬರುವ ವ್ಯಕ್ತಿಯ ಖಾತೆಗೆ ಜಮೆ ಮಾಡಲು ನಿರ್ಧರಿಸಿದೆ.
ಈ ಸುದ್ದಿ ನೋಡಿ:- ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ಸೇವೆ ಆರಂಭ
ಗೃಹಲಕ್ಷ್ಮಿ ಯೋಜನೆ
ಕರ್ನಾಟಕ ಸರ್ಕಾರ ರಾಜ್ಯದ ಮಹಿಳೆಯರಿಗೆ 2000 ರೂಪಾಯಿ ಸಹಾಯಧನ ನೀಡುವ ಸಲುವಾಗಿ ಆರಂಭಿಸಿರುವ ಯೋಜನೆಯೇ ʻಗೃಹಲಕ್ಷ್ಮಿ ಯೋಜನೆʼ. ಈ ಯೋಜನೆ ಮೂಲಕ ಅರ್ಹ ಫಲಾನುಭವಿಗಳಿಗೆ ಪ್ರತೀ ತಿಂಗಳು ಅವರ ಖಾತೆಗೆ 2000 ರೂ ಜಮೆ ಮಾಡಲಾಗುತ್ತದೆ.
ಯುವ ನಿಧಿ ಯೋಜನೆ
ಡಿಸೆಂಬರ್ 26 ರಂದು ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಗೆ ನೋಂದಣಿ ತೆರೆಯಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಭರವಸೆಗಳಲ್ಲಿ ಒಂದಾಗಿದೆ. ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುತ್ತದೆ. ಕಾರ್ಯಕ್ರಮವು ಜನವರಿ 1, 2024 ರಿಂದ ಜಾರಿಗೆ ಬಂದಿದೆ.