ಪದವಿಯ ನಂತರ ʻನೌಕರಿʼ ಪಡೆಯೋದು ಕಠಿಣ. ಇದು ಸುಲಭ ಅಲ್ಲವೇ ಅಲ್ಲ. ಉದ್ಯೋಗ ಹುಡುಕಾಟ, ಪದವಿ ಪೂರ್ಣಗೊಳಿಸುವಿಕೆ ಮತ್ತು ಉದ್ಯೋಗ ಸಂದರ್ಶನದ ನಡುವಿನ ಮಧ್ಯಂತರವು ಹೆಚ್ಚಿನ ವಿದ್ಯಾರ್ಥಿಗಳಿಗೆ ದುಃಸ್ವಪ್ನದಂತಿದೆ. ಆದರೆ ನೀವು ನಿಜವಾಗಿಯೂ ನಿಮ್ಮ ಅಧ್ಯಯನವನ್ನು ಪೂರ್ಣಗೊಳಿಸುವವರೆಗೆ ಕೆಲಸಕ್ಕೆ ಅರ್ಜಿ ಸಲ್ಲಿಸಲು ಕಾಯಬೇಕಾಗಿಲ್ಲ.
ಹೌದು, ನೀವು 10ನೇ ತರಗತಿ ಪಾಸ್ ಆಗಿದ್ರೆ ಸಾಕು ನೀವೂ ಸರ್ಕಾರಿ ಉದ್ಯೋಗ ಪಡೆಯಬಹುದು. ಅದರಲ್ಲಿ ಸಾರಿಗೆ ನೌಕರಿಯೂ ಒಂದು. ಇದೀಗ ಆ ವಿಭಾಗದಲ್ಲಿ ಬೆಂಗಳೂರಿನಲ್ಲಿ BMTCಯಲ್ಲಿ ಉದ್ಯೋಗಕ್ಕಾಗಿ ಆಹ್ವಾನ ನೀಡಲಾಗಿದೆ. ಆಸಕ್ತರು ಇಲ್ಲಿ ಅರ್ಜಿ ಸಲ್ಲಿಸಿ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಹಾಗಾದ್ರೆ, ಬನ್ನಿ ಇಂದಿನ ಈ ಲೇಖನದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯೋಣ….
BMTCಯಲ್ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಈ ಸುದ್ದಿ ಓದಿ:- IDBI ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗ ಅವಕಾಶ: ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ.!
ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ..
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ 2500 ಕಂಡಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…
ಬೆಂಗಳೂರು ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಬಿಎಂಟಿಸಿ (Bangalore Metropolitan Transport Corporation- BMTC) ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶವನ್ನು ಹೆಚ್ಚೆಚ್ಚು ಒದಗಿಸುತ್ತಿದೆ. ಸದ್ಯಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2,500 ಕಂಡಕ್ಟರ್ (ನಿರ್ವಾಹಕ) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.
ಈ ಸುದ್ದಿ ಓದಿ:- ಹೊಸ ʻಕಾರ್ಮಿಕ ಕಾರ್ಡ್ʼ ಪಡೆಯಲು ಅರ್ಜಿ ಆಹ್ವಾನ… ಆಸಕ್ತರು ಅರ್ಜಿ ಸಲ್ಲಿಸಿ.!
ಕೆಲ ದಿನಗಳ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ಜಾಲತಾಣದಲ್ಲಿ ಹಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ ಹುದ್ದೆಗಳು ಖಾಲಿ ಇವೆ. ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ವಿದ್ಯಾರ್ಹತೆ, ವಯೋಮಿತಿ, ಮಾಸಿಕ ಸಂಬಳ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ
BMTC ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆಯು ನಿಗಧಿಪಡಿಸಿದ ದಿನಾಂಕಕ್ಕೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಟ ವಯಸ್ಸು 35 ವರ್ಷ ಮೀರಿರಬಾರದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಮಾಸಿಕ ಸಂಬಳವೆಷ್ಟು?
BMTC ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ 30,000 ರೂಪಾಯಿ ಇರುತ್ತದೆ. ಸಂಬಳದ ಜೊತೆಗೆ ಇತರೆ ಭತ್ಯೆಗಳು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕೂಡ ಒದಗಿಸಲಾಗುವುದು.
ಕಂಡಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ?
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ (Written test) ಪರೀಕ್ಷೆ ನಡೆಸಿ ನಂತರ ದೈಹಿಕ ಪರೀಕ್ಷೆ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
BMTC ನೇಮಕಾತಿ 2024 ಗೆ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲನೆಯದಾಗಿ BMTC ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಈ ಸುದ್ದಿ ಓದಿ:- ನಾಟಿ ಕೋಳಿ ಸಾಕಾಣಿಕೆಯಿಂದ ಲಕ್ಷ ಲಕ್ಷ ಸಂಪಾದಿಸಿ.! ನಿಮ್ಮ ಕೈ ಹಿಡಿಯಲಿದೆ ಈ ಬ್ಯುಸಿನೆಸ್ ಐಡಿಯಾ.!
– BMTC ಕಂಡಕ್ಟರ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
– BMTC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ.
– ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
– ನಿಮ್ಮ ವರ್ಗದ ಪ್ರಕಾರ, ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
BMTC ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.
– ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ವಿಶೇಷ ಸೂಚನೆ : ಈ ಎಲ್ಲಾ ಮಾಹಿತಿಯು ಹಿಂದಿನ ನೇಮಕಾತಿಗಳ ಆಧಾರದ ಮೇಲೆ ಲಭ್ಯವಿದ್ದು, ನಿಖರ ಮತ್ತು ಖಚಿತ ಮಾಹಿತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅಧಿಕೃತ ಅಧಿಸೂಚನೆ ಪ್ರಕಟಿಸಿದ ನಂತರ ನಮ್ಮ ಈ ‘ಸಮಗ್ರ ಕೃಷಿ’ ಜಾಲತಾಣದಲ್ಲಿ ನೀಡಲಾಗುವುದು. ಮುಂದಿನ ಅಪ್ಡೇಟ್’ಗಳಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಜಾಯ್ನ್ ಆಗಿ.