ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ಹಲವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಕರ್ನಾಟಕ ರಾಜ್ಯ ಪರೀಕ್ಷಾ ಮಂಡಳಿಯು ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸುಮಾರು 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಸಹಾಯಕ ಎಂಜಿನಿಯರ್ (ಸಿವಿಲ್) ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) ಹುದ್ದೆ ಇದಾಗಿದ್ದು ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಉದ್ಯೋಗದ ವಿವರಗಳು, ಉದ್ಯೋಗ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ವಿಧಾನ ಇತ್ಯಾದಿಗಳಂತಹ ಉದ್ಯೋಗಾವಕಾಶಗಳ ಕುರಿತು ವಿವರವಾದ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಈ ಸುದ್ದಿ ತಪ್ಪದೆ ಓದಿ:- HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಇನ್ಮುಂದೆ ದಂಡ ಗ್ಯಾರಂಟಿ.! ಮೊಬೈಲ್ ಮೂಲಕವೇ HSRP ನಂಬರ್ ಪ್ಲೇಟ್ ಪಡೆಯುವ ವಿಧಾನ.! ನಿಮ್ಮ ಮನೆ ಬಾಗಿಲಿಗೆ ಬರಲಿದೆ.!
ಈ ಮಾಹಿತಿಯನ್ನು ಒದಗಿಸಲು ಯಾವುದೇ ಪರಿಹಾರವನ್ನು ಪಡೆಯುವುದಿಲ್ಲ. ಇಲ್ಲಿ ಪಟ್ಟಿ ಮಾಡಲಾದ ಎಲ್ಲಾ ಮಾಹಿತಿಯು ಅಧಿಕೃತ ಸರ್ಕಾರಿ ಅಥವಾ ಸಂಸ್ಥೆಯ ವೆಬ್ಸೈಟ್ಗಳು ಮತ್ತು ದೈನಂದಿನ ಪತ್ರಿಕೆಗಳಲ್ಲಿ ಪ್ರಕಟವಾದ ಜಾಹೀರಾತುಗಳಿಂದ ಬರುತ್ತದೆ. ನಾಮನಿರ್ದೇಶನಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಈ ಲೇಖನದಲ್ಲಿ ಒದಗಿಸಲಾದ ಅಧಿಕೃತ ಲಿಂಕ್ಗಳನ್ನು ಪರಿಶೀಲಿಸಿ ಮತ್ತು ಅನ್ವಯಿಸುವ ಮೊದಲು ಅವುಗಳ ದೃಢೀಕರಣವನ್ನು ಪರಿಶೀಲಿಸಿ.
ಫೆಬ್ರವರಿ 10ರ ಬಳಿಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮಾರ್ಚ್ 10. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
KUWSDB ಅಧಿಸೂಚನೆ 2024
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://kuwsdb.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಸಹಾಯಕ ಇಂಜಿನಿಯರ್, ಪ್ರಥಮ ವಿಭಾಗದ ಲೆಕ್ಕ ಸಹಾಯಕ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ. KUWSDB Notification 2024.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸಹಾಯಕ ಎಂಜಿನಿಯರ್ (ಸಿವಿಲ್)-50 ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ)- 14 ಹುದ್ದೆಗಳಿವೆ. ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಇ. ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು.
ಈ ಸುದ್ದಿ ತಪ್ಪದೆ ಓದಿ:- ಮನೆಗೆ & ಸೈಟ್ ಗೆ ಇ-ಸ್ವತ್ತು ಹೇಗೆ ಮಾಡಿಸುವುದು ಹೇಗೆ.? ದಾಖಲೆಗಳೇನು ಬೇಕು? ಪ್ರಕ್ರಿಯೆ ನಿಯಮಗಳ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.!
ಅದೇ ರೀತಿ ಬಿ.ಕಾಂ ಪದವಿ ಪಡೆದವರು ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ. ಶೀಘ್ರದಲ್ಲೇ ಸರ್ಕಾರವು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಾಗುವುದು.
ಉದ್ಯೋಗದ ಸ್ಥಳ: ಕರ್ನಾಟಕ
ಅರ್ಜಿ ಶುಲ್ಕ
ಸಾಮಾನ್ಯ / ಪ್ರವರ್ಗ 2ಎ / 2ಬಿ / 3ಎ / 3ಬಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವವರು 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಅನ್ವಯಯಾಗುತ್ತದೆ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕರ್ನಾಟಕ ಪರೀಕ್ಷಾ ಪ್ರಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 27,650 ರೂ.-83,900 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪರೀಕ್ಷಾ ವಿಧಾನ
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಫ್ಲೈನ್ ಮೂಲಕ ಒಎಂಆರ್ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುವುದು. ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆ: ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆ ಇರಲಿದೆ. ಪತ್ರಿಕೆ -1ರಲ್ಲಿ ಸಾಮಾನ್ಯ ಜ್ಞಾನದ ಪ್ರಶ್ನೆಗಳಿದ್ದರೆ, ಪತ್ರಿಕೆ – 2ರಲ್ಲಿ ನಿರ್ದಿಷ್ಟ ವಿಷಯದ ಕುರಿತಾದ ಪ್ರಶ್ನೆಗಳಿರುತ್ತವೆ.
ಈ ಸುದ್ದಿ ತಪ್ಪದೆ ಓದಿ:- ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಹೊಸ ರೂಲ್ಸ್ ಜಾರಿ.!
ಪ್ರಥಮ ದರ್ಜೆ ಸಹಾಯಕರು ಹುದ್ದೆ: ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆ ಇರಲಿದೆ. ಪತ್ರಿಕೆ -1ರಲ್ಲಿ ಸಾಮಾನ್ಯ ಜ್ಞಾನದ ಪ್ರಶ್ನೆಗಳಿದ್ದರೆ, ಪತ್ರಿಕೆ – 2ರಲ್ಲಿ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಪಟ್ಟ ಪ್ರಶ್ನೆಗಳಿರುತ್ತವೆ.
ಪರೀಕ್ಷೆ ನಡೆಯುವ ಸ್ಥಳ
ಈ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಪ್ರತಿಕಾ ಪ್ರಕಟಣೆ ಮತ್ತು ವೆಬ್ಸೈಟ್ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://kuwsdb.karnataka.gov.in/
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2024
* ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 10, 2024
* ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮಾರ್ಚ್ 14, 2024